Wednesday, August 12, 2026
Homeಕ್ರೈಮ್ಹಾಸನ: ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ: 17 ಮಂದಿ ಅರೆಸ್ಟ್!

ಹಾಸನ: ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ: 17 ಮಂದಿ ಅರೆಸ್ಟ್!

Telegram Group
Join Now

ಹಾಸನ: ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜೂಜಾಟದ ವಿರುದ್ಧ ಸಮರ ಸಾರಿರುವ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ 17 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಪೆನ್ಷನ್‌ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ನಡೆದ ಈ ದಾಳಿಯಲ್ಲಿ ಒಟ್ಟು ಆರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ಮಾರ್ಗದರ್ಶನದಲ್ಲಿ, ಹಾಸನ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕ ಗಂಗಾಧರಪ್ಪ ಅವರ ನೇತೃತ್ವದಲ್ಲಿ ಈ ವಿಶೇಷ ತಂಡವನ್ನು ರಚಿಸಲಾಗಿತ್ತು. ಪೆನ್ನನ್‌ಮೊಹಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಟ್ಕಾ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬಂಧಿತರಿಂದ ಪೊಲೀಸರು 65,140 ರೂ. ನಗದು, 20 ಸ್ಮಾರ್ಟ್‌ಫೋನ್‌ಗಳು, 2 ಸ್ಕೂಟಿ ಹಾಗೂ ಆಟೋ ರಿಕ್ಷಾಗಳನ್ನ ವಶಪಡಿಸಿಕೊಂಡಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪೆನ್ನನ್ ಮೊಹಲ್ಲಾ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಸ್ವಾಮಿನಾಥ, ಹಾಸನ ನಗರ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್‌ಗಳಾದ ಕೇಶವಪ್ರಸಾದ್‌ ಮತ್ತು ಪ್ರಿಯಾಂಕ, ಶಾಂತಿಗ್ರಾಮ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್‌ಗಳಾದ ಅರುಣ್‌, ಮಂಜುನಾಥ, ಅಂತಿಮ ಹಾಗೂ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡುವಂತೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ 112 ಕರೆಮಾಡಲು ತಿಳಿಸಿದೆ , ಹಾಗೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments