Tuesday, February 10, 2026
Homeಜಿಲ್ಲಾಸುದ್ದಿಹಾಸನ: ನಗರದಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲು ಸಕಲ ಸಿದ್ದತೆ!

ಹಾಸನ: ನಗರದಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲು ಸಕಲ ಸಿದ್ದತೆ!

ಹಾಸನ ಜಿಲ್ಲೆಯ ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.


ಅಕ್ಟೋಬರ್ 30ರ ಮಂಗಳವಾರ ಹಾಸನದ ಡೇರಿ ವೃತ್ತದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸ್ಥಳೀಯ ಹಾಗೂ ಹೊರ ಜಿಲ್ಲೆಯ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.


ಜಿಲ್ಲೆಯ ಅರ್ಹರು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ಪ್ರಯೋಜನ ಪಡೆಯಬೇಕೆಂದು ಕೋರುತ್ತೇನೆ.


ಇದೇ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಇಂಡಿಯಾ ಸ್ಕಿಲ್ಸ್ 2025 ಬಿತ್ತಿಪತ್ರ ಅನಾವರಣ ಮಾಡಲಾಯಿತು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!