ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಪೋಟಗೊಂಡು ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕೆಲ ಪ್ರಯಾಣಿಕರ ಮೊಬೈಲ್, ಲಗೇಜ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
