Thursday, March 26, 2026
Homeಜಿಲ್ಲಾಸುದ್ದಿಹಾಸನ/ ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಆಶಾ ಕಾರ್ಯಕರ್ತರಿಂದ ಪ್ರತಿಭಟನೆ!

ಹಾಸನ/ ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಆಶಾ ಕಾರ್ಯಕರ್ತರಿಂದ ಪ್ರತಿಭಟನೆ!

ಹಾಸನ/ ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯಸರ್ಕಾರದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ 10 ಸಾವಿರ ರೂ ಗ್ಯಾರಂಟಿಗೊಳಿಸುವ ಆದೇಶವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿ ಗೌರವಧನ ನೀಡಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಶಾಖೆ ಆಜಾದ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು ೫೦೦ ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ನಂತರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿ ಕೂಡಲೇ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ೧ ಸಾವಿರ ರೂ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು. ಜನಸಂಖ್ಯೆಯ ಮಿತಿ, ಅವೈಜ್ಞಾನಿಕ ಮೌಲ್ಯಮಾಪನ ಶಿಕ್ಷಣದ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈಬಿಡಲು ಹುನ್ನಾರ ನಡೆಸುತ್ತಿರುವ ಆದೇಶವನ್ನು ಕೈಬಿಡಬೇಕೆಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!