Friday, July 31, 2026
Homeಕ್ರೈಮ್ಹಾಸನ: ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌: ಸಿನಿಯರ್‌ & ಜ್ಯೂನಿಯರ್‌ ವಿದ್ಯಾರ್ಥಿಗಳ ನಡುವೆ ಗಲಾಟೆ!

ಹಾಸನ: ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌: ಸಿನಿಯರ್‌ & ಜ್ಯೂನಿಯರ್‌ ವಿದ್ಯಾರ್ಥಿಗಳ ನಡುವೆ ಗಲಾಟೆ!

Telegram Group
Join Now

ಹಾಸನ: ಜಿಲ್ಲೆಯ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌ ವಿಚಾರಕ್ಕೆ ಸಿನಿಯರ್‌ ಹಾಗೂ ಜ್ಯೂನಿಯರ್‌ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.

ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 

ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕಾಲೀಜಿನ ಡೀನ್‌ ನಟರಾಜ್‌ ಅವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರು ಆಧರಿಸಿ ತನಿಖೆಗೆ ಕಮಿಟಿ ರಚಿಸಲಾಗುವುದು. ಕಮಿಟಿ ನೀಡುವ ವರದಿ ಆಧರಿಸಿ ಕ್ರಮಕೈಗೊಳ್ಳಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.

ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಲೇಜಿಗೆ ಪೊಲೀಸರು ಸಹ ಭೇಟಿ ನೀಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಲು ಮುಂದೆ ಬಂದಿಲ್ಲ ಎನ್ನಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments