Monday, February 16, 2026
Homeಜಿಲ್ಲಾಸುದ್ದಿಹಾಸನ: ಭಾರೀ ಮಳೆಗೆ ಶಾಲೆಯ ಗೋಡೆ ಕುಸಿತ: ರಜೆಯಿಂದಾಗಿ ತಪ್ಪಿದ ಮಹಾದುರಂತ!

ಹಾಸನ: ಭಾರೀ ಮಳೆಗೆ ಶಾಲೆಯ ಗೋಡೆ ಕುಸಿತ: ರಜೆಯಿಂದಾಗಿ ತಪ್ಪಿದ ಮಹಾದುರಂತ!

ಹಾಸನ: ಭಾರೀ ಗಾಳಿ ಮಳೆಗೆ ಸಕಲೇಶಪುರದ ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಇರಲಿಲ್ಲ. ಇದರಿಂದ ನಡೆಯಬೇಕಿದ್ದ‌ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಹಾಸನ ಜಿಲ್ಲೆಯಲ್ಲಿ ಕಳೆದ ಎರಡು‌ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಇಂದು (ಆ.18) ಶಾಲೆಯ ಕಟ್ಟಡದ ಗೋಡೆ ಹಾಗೂ ಹೆಂಚುಗಳು ಬಿದ್ದಿವೆ. ಅಕಸ್ಮಾತ್‌ ಶಾಲೆಗೆ ರಜೆ ಇಲ್ಲದೇ ಹೋಗಿದ್ದರೆ, ಹಲವಾರು ಮಕ್ಕಳು ಇಲ್ಲಿ ಸೇರಿರುತ್ತಿದ್ದರು. ಇದರಿಂದ ಅನಾಹುತ ಆಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್‌ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ಮಕ್ಕಳು ಮತ್ತು ಶಿಕ್ಷಕರು ಬಚಾವ್‌ ಆಗಿದ್ದಾರೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಕಲೇಶಪುರ ತಾಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ, ಮರಗಳು ಧರೆಗುರುಳಿವೆ. ಗುಡ್ಡ ಕುಸಿತದಿಂದ ಕಡಗರವಳ್ಳಿ, ಬಾಚೀಹಳ್ಳಿ, ವಳಲಹಳ್ಳಿ, ಹೊಂಗಡಹಳ್ಳ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಆತಂಕ ಸಹ ಇದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!