ಹಾಸನ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಒಳ ಮೀಸಲಾತಿ ಜಾರಿ ಮಾಡುವ ಕುರಿತು ಆಗಸ್ಟ್ 1ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕಾಗಿ ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರಕಾಶ್ ಅವರು ತಿಳಿಸಿದರು.
ರಾಜ್ಯದಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಒಳ ಮೀಸಲಾತಿ ಜಾರಿಗೊಳಿಸಬೇಕೆಂಬ ನಮ್ಮ ಬಹುಕಾಲದ ಬೇಡಿಕೆಯನ್ನ ಸರ್ಕಾರದ ಮುಂದೆ ತರಲು ಉದ್ದೇಶಿಸಿದ್ದೇವೆ ಎಂದರು.
ಈ ಕುರಿತು ಸಮುದಾಯದ ಬೇಡಿಕೆಗಳನ್ನ ತಮ್ಮ ಮೂಲಕ ಸರ್ಕಾರಕ್ಕೆ ತಲುಪಿಸಲು ಆಗಸ್ಟ್ 1ರಂದು ಬೆಳಗ್ಗೆ ಹಾಸನ ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಶಾಂತಿಯುತವಾಗಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ಕೊನೆಯಲ್ಲಿ ನಾವು ಡಿಸಿಯವರರಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ. ಪ್ರತಿಭಟನೆ ಶಾಂತಿಯುತವಾಗಿ ಹಾಗೂ ಸಂವಿಧಾನಬದ್ಧವಾಗಿರುತ್ತದೆ ಎಂದು ತಿಳಿಸಿದರು.
ಈ ವೇಳೆ ಶೇಖರಪ್ಪ, ಲೋಕೇಶ್, ಲಿಂಗರಾಜು, ಮೂಡಲಯ್ಯ ಸೇರಿ ಹಲವರು ಉಪಸ್ಥಿತರಿದ್ದರು.