Tuesday, February 10, 2026
Homeಕ್ರೈಮ್ಹಾಸನ: ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಹಾಸನ ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಹಾಸನ: ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಹಾಸನ ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಹಾಸನ/ ಬೆಂಗಳೂರು : ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಬದಿಯಲ್ಲಿ ನಿಂತಿದ್ದ ಪಿಕ್‌ಅಪ್‌ ವಾಹನಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ​

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಗಗನ್ (27) ಹಾಗೂ ಹೊಳೆನರಸೀಪುರದ ನಿವಾಸಿ ದರ್ಶನ್ (26) ಮೃಪಟ್ಟ ದುರ್ದೈವಿಗಳು. ಗಗನ್ ಅವರು ಮಾದನಾಯಕನಹಳ್ಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರೆ, ದರ್ಶನ್ ಅವರು ಕೋಳಿ ಸಾಗಣೆ ವಾಹನದ ಚಾಲಕರಾಗಿ ವೃತ್ತಿ ಮಾಡುತ್ತಿದ್ದರು. ಅಪಘಾತದ ವೇಳೆ ಕಾರಿನಲ್ಲಿದ್ದ ಮತ್ತೊಬ್ಬ ಸ್ನೇಹಿತ ಸಿದ್ದೇಶ್ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಮೂವರು ಸ್ನೇಹಿತರು ಭಾನುವಾರ ತಡರಾತ್ರಿ ಎಲೆಕ್ಟ್ರಾನಿಕ್ ಸಿಟಿ ಬಳಿಯಿರುವ ತಮ್ಮ ಸ್ನೇಹಿತನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾಚೋಹಳ್ಳಿ ಬಳಿ ರಸ್ತೆಬದಿಯಲ್ಲಿ ನಿಂತಿದ್ದ ಬಲೆರೊ ಪಿಕ್‌ಅಪ್‌ ವಾಹನಕ್ಕೆ ಇವರು ಚಲಾಯಿಸುತ್ತಿದ್ದ ಕಾರು ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.

ಕಾರು ಚಾಲನೆ ಮಾಡುತ್ತಿದ್ದ ಗಗನ್ ಮತ್ತು ಪಕ್ಕದ ಸೀಟಿನಲ್ಲಿ ಕುಳಿತಿದ್ದ ದರ್ಶನ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃಪಟ್ಟಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ದುರತಕ್ಕೆ ಕಾರಣವಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

​ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!