Wednesday, February 11, 2026
Homeಕ್ರೈಮ್ಹಾಸನ: ಊಟ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ: ಆಗಿದ್ದೇನು?

ಹಾಸನ: ಊಟ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ: ಆಗಿದ್ದೇನು?

ಹಾಸನ: ಹೋಟೆಲ್‌ನಲ್ಲಿ ಊಟ ಮಾಡಿ ಕೈತೊಳೆಯುವಾಗ ಕುಸಿದು ಬಿದ್ದು ಯುವಕ ದಿಢೀರ್ ಸಾವನ್ನಪ್ಪಿದ ಘಟನೆ ಹಾಸನ ನಗರದ ಬಸಟ್ಟಿಕೊಪ್ಪಲಿನಲ್ಲಿ ನಡೆದಿದೆ.

ನೇಪಾಳ ಮೂಲದ ಬಾಲರಾಜ್ ಬಹದ್ದೂರ್ (26) ಮೃತ ಯುವಕ. ಹಾಸನದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲರಾಜ್ ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ನಾನ್‌ವೆಜ್ ಊಟ ಮಾಡಿದ್ದ. ಊಟ ಮಾಡಿ ಕೈತೊಳೆಯುವಾಗ ವಾಂತಿ ಮಾಡಿಕೊಂಡು ಕುಸಿದು ಬಿದ್ದು ಹಠಾತ್ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!