Wednesday, August 12, 2026
Homeಜಿಲ್ಲಾಸುದ್ದಿಇಂದಿನಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ: ಹರಿದು ಬರುತ್ತಿರುವ ಭಕ್ತರು!

ಇಂದಿನಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ: ಹರಿದು ಬರುತ್ತಿರುವ ಭಕ್ತರು!

Telegram Group
Join Now

ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.

ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ

ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿಯನ್ನು ತೆರೆಯಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು.

ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಕಳೆದ ನ.3 ರಂದು ಮುಚ್ಚಿದ್ದ ಗರ್ಭಗುಡಿ ಬಾಗಿಲು ಇಂದು ತೆರೆಯಲಿದೆ. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments