Monday, February 9, 2026
Homeಜಿಲ್ಲಾಸುದ್ದಿಹಾಸನಾಂಬಾ ಉತ್ಸವ: ವಿಐಪಿ ಸಂಪ್ರದಾಯಕ್ಕೆ ಬ್ರೇಕ್: ಜನಸ್ನೇಹಿ ಉತ್ಸವಕ್ಕೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ

ಹಾಸನಾಂಬಾ ಉತ್ಸವ: ವಿಐಪಿ ಸಂಪ್ರದಾಯಕ್ಕೆ ಬ್ರೇಕ್: ಜನಸ್ನೇಹಿ ಉತ್ಸವಕ್ಕೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ

ಹಾಸನ: ಅಕ್ಟೋಬರ್ 9ರಿಂದ ಅಕ್ಟೋಬರ್ 23ರವರೆಗೆ ಹಾಸನಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನಾಂಬಾ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೇ ಜನಸ್ನೇಹಿ ಹಾಸನಾಂಬಾ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದುಎಂದು ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!