ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ.
ಅ.10ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಸೋಮವಾರ (ಅ.20)ರವೆರೆಗೂ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ
ಈವರೆಗೂ ಹಾಸನಾಂಬೆ ದೇವಸ್ಥಾನಕ್ಕೆ 1,000, 300ರೂ. ಟಿಕೆಟ್ ಹಾಗೂ ಲಾಡು ಪ್ರಸಾದದಿಂದ ದೇಗುಲಕ್ಕೆ ಒಟ್ಟು 17 ಕೋಟಿ ರೂ. ಆದಾಯ ಹರಿದುಬಂದಿದ್ದು, ನಾಳೆ (ಅ.22) ಸಂಜೆ 7ಕ್ಕೆ ಸಾರ್ವಜನಿಕ ದರ್ಶನಕ್ಕೆ ಅದ್ಧೂರಿ ತೆರೆ ಬೀಳಲಿದೆ.
