ಹಾಸನ : ಎರಡು ಸಾರಿಗೆ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿರುವ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಮೂಡಿಗೆರೆ ತೆರಳುತ್ತಿದ್ದ ಒಂದು ಕೆಎಸ್‌ಆರ್‌ಟಿಸಿ ಬಸ್ ಹಾಗೆ ಸಕಲೇಶಪುರಕ್ಕೆ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಗಾಜುಗಳೆಲ್ಲಾ ಪುಡಿ ಪುಡಿ ಆಗಿದ್ದು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿದೆ ಗಾಜುಗಳು ಬಿದ್ದಿವೆ
ಅಂದ ಹಾಗೆ ಎರಡು ಬಸ್‌ಗಳಲ್ಲಿ ವಿದ್ಯಾರ್ಥಿಗಳು ಸೇರಿ ಹಲವು ಪ್ರಯಾಣಿಕರಿದ್ದು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.