ಹಾಸನ: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಸರಣಿ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲಾಗುತ್ತಿದೆ.

ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೃದಯ ತಪಾಸಣೆ ನಡೆಸಿದ್ದು ಕಳೆದ ಒಂದು ವಾರದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಅವರು ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಮಕ್ಕಳಿಗೆ ಹೃದಯದ ತಪಾಸಣೆ ನಡೆಸುವಂತೆ ಆದೇಶ ನೀಡಿದ್ದರು ಹಾಗಾಗಿ ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ತಪಾಸಣೆ ನಡೆಸಲಾಯಿತು
ಕಳೆದ ಒಂದು ವಾರದಿಂದ ನಡೆಯುತ್ತಿರುವ ಹೃದಯ ತಪಾಸಣೆ ಇದುವರೆಗೂ 1,185 ಶಾಲೆಯ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸಲಾಗಿದ್ದು ಈವರೆಗೆ 50 ಸಾವಿರಕ್ಕಿಂತಲೂ ಹೆಚ್ಚು ಮಕ್ಕಳಿಗೆ ತಪಾಸಣೆ ನಡೆಸಲಾಗಿದೆ ಅದರಲ್ಲಿ 112 ವಿದ್ಯಾರ್ಥಿಗಳಿಗೆ ಶಂಕಿತ ಹೃದಯದ ಸಮಸ್ಯೆ ಇದ್ದು ಆ ಕೂಡಲೇ ವಿದ್ಯಾರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್ʼಗೆ ಕಳುಹಿಸಿದ್ದು ಹೃದಯ ಸಮಸ್ಯೆ ಇದ್ದರೆ ಚಿಕಿತ್ಸೆ ಕೊಡಿಸಲು ಸಿದ್ಧತೆ ನಡೆಸಲಾಗಿದೆ