ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಶನಿವಾರ) ರಜೆ ಘೋಷಿಸಲಾಗಿದೆ.
ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ ತಾಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಗಳಾದ ಆವುತಿ, ಜಾಗರ, ವಸ್ತಾರೆ, ಖಾಂಡ್ಯದ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.