Friday, October 16, 2026
Homeಜಿಲ್ಲಾಸುದ್ದಿಕಾಫಿನಾಡು ಚಿಕ್ಕಮಗಳೂರಿನಲ್ಲಿ ಭರ್ಜರಿ ಮಳೆ: ರೈತರ ಮೊಗದಲ್ಲಿ ಸಂತಸ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭರ್ಜರಿ ಮಳೆ: ರೈತರ ಮೊಗದಲ್ಲಿ ಸಂತಸ

Telegram Group
Join Now

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ ದೇವ ಕೃಪೆ ತೋರಿದ್ದು, ಮಲೆನಾಡಿನಾದ್ಯಂತ ಬಿರುಸಿನ ಮಳೆ ಸುರಿದಿದೆ. ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕಳಸ ಹಾಗೂ ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ.

ಚಿಕ್ಕಮಗಳೂರು ನಗರದಲ್ಲೂ ಮಳೆಯ ವಾತಾವರಣ ಮುಂದುವರಿದಿದ್ದು, ರಸ್ತೆ ಹಾಗೂ ಕಾಲುವೆಗಳಲ್ಲಿ ನೀರು ಹರಿದುಬಂದಿದೆ. ಮಳೆ ಕೊರತೆಯಿಂದ ಕಂಗಾಲಾಗಿ ಮಳೆಗಾಗಿ ಆಕಾಶದತ್ತ ಕಣ್ಣಿಟ್ಟಿದ್ದ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಾರರು ಹಾಗೂ ರೈತರ ಮೊಗದಲ್ಲಿ ಈ ಅನಿರೀಕ್ಷಿತ ಮಳೆ ಮಂದಹಾಸ ಮೂಡಿಸಿದೆ.

ಅಕ್ಟೋಬರ್ 20 ರವರೆಗೆ ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಹಿಂಗಾರು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.

ಮಳೆ ತೀವ್ರವಾಗಿರುವ ಕಾರಣ ಘಾಟ್‌ ಸೆಕ್ಷನ್‌ಗಳು, ಜಲಪಾತಗಳು ಹಾಗೂ ತಗ್ಗು ಪ್ರದೇಶಗಳತ್ತ ಪ್ರಯಾಣಿಸುವಾಗ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ಮತ್ತೊಂದೆಡೆ ಬಯಲುಸೀಮೆ ಭಾಗದ ಕಡೂರು, ತರೀಕೆರೆ ಹಾಗೂ ಅಜ್ಜಂಪುರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!