Friday, July 31, 2026
Homeಕ್ರೈಮ್ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ಪಾರು!

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ಪಾರು!

Telegram Group
Join Now

ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ ಮುಳುಗಿದೆ. ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೂಡಿಗೆರೆ ಪಟ್ಟಣ ಬಿಟ್ಟು ಇಡೀ ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರೀ ಗಾಳಿ, ಮಳೆಗೆ ಮೂಡಿಗೆರೆಯಲ್ಲಿ ನೂರಾರು ಮರಗಳು ನೆಲಕ್ಕುರುಳಿವೆ

ಹೌದು .. ಗಾಳಿ, ಮಳೆ, ಸಿಡಿಲಿಗೆ ಗೌರಮ್ಮ ಎಂಬವರ ಮನೆ ಮೇಲೆ ತೆಂಗಿನಮರ ಬಿದ್ದಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಒಂದೇ ರಾತ್ರಿಯ ಮಳೆಗೆ ಮೂಡಿಗೆರೆ ತಾಲೂಕು ಅಕ್ಷರಶಃ ಕಂಗಾಲಾಗಿದೆ.

ಧರೆಗುರುಳಿದ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ರಸ್ತೆ ಸಂಪರ್ಕ ಇಲ್ಲದ ಕಾರಣ ಕಂಬ ತೆರವುಗೊಳಿಸಲು ಸ್ಥಳೀಯರು ಮುಂದಾಗಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್-ಮತ್ತಿಕಟ್ಟೆ ಮಾರ್ಗದಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments