Tuesday, February 10, 2026
Homeಜಿಲ್ಲಾಸುದ್ದಿಚಿಕ್ಕಮಗಳೂರಲ್ಲಿ ಭಾರೀ ಗಾಳಿ ಮಳೆ:ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ, ಟ್ರಾಫಿಕ್‌ ಜಾಂ!

ಚಿಕ್ಕಮಗಳೂರಲ್ಲಿ ಭಾರೀ ಗಾಳಿ ಮಳೆ:ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ, ಟ್ರಾಫಿಕ್‌ ಜಾಂ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ ಮಳೆ ಅಬ್ಬರ ಮುಂದುವರೆದಿದ್ದು ಬಾರಿ ಗಾಳಿ ಮಳೆಗೆ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 174 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಶಿರಗುಂದ ಗ್ರಾಮದ ಬಳಿ ನಡೆದಿತ್ತು.

ಮರ ಬಿದ್ದ ಪರಿಣಾಮ ಮೂಡಿಗೆರೆ, ಕೊಪ್ಪ, ಶೃಂಗೇರಿ,ಎನ್. ಆರ್.ಪುರ ಮಾರ್ಗದಲ್ಲಿ ತೆರಳುವ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು ಹೀಗಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಬೃಹತ್ ಮರ ತೆರೆವುಗೊಳಿಸಲು ಸ್ಥಳೀಯರು ಹರಸಾಹಸಪಟ್ಟರು.ಹಾಗೆ ಮರ ಬಿದ್ದ ರಭಸಕೆ ವಿದ್ಯುತ್ ಕಂಬಗಳಿಗೂ ಹಾನಿ ಉಂಟಾಗಿ ವಿದ್ಯುತ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ವಾಹನಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು ಹಾಗೆ ಸ್ಥಳೀಯರ ನೆರವಿನಿಂದ ಮರ ತೆರವು ಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!