Tuesday, February 10, 2026
Homeಕ್ರೈಮ್ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ: ಹೈ ಅಲರ್ಟ್ ಘೋಷಣೆ

ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ: ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು: ನಗರದ  ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮೂರು ದಿನಗಳ ಕಾಲ ದತ್ತ ಮಾಲೆ ನಡೆಯಲಿದ್ದು, ಖಾಕಿ ಸರ್ಪಗಾವಲನ್ನೇ ಹಾಕಲಾಗಿದೆ. ಶೋಭಾಯಾತ್ರೆ ಹಿನ್ನೆಲೆ ಅಂಗಡಿಮುಂಗಟ್ಟುಗಳು ಬಂದ್‌ ಇರಲಿದ್ದು, ಎರಡು ದಿನ ಮದ್ಯ ಮಾರಾಟಕ್ಕೂ ನಿಷೇಧ ಹೇರಿದ್ದಾರೆ.

ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಡಿ.4ರಂದು (ನಾಳೆ) ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ನಮೂನೆಯ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ, ಬಿಯರ್ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಣೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಡಿಸಿ ಸಿ.ಎನ್. ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಸಿಟಿ ರವಿ ಸೇರಿ ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಜಾಗದಲ್ಲಿ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ, ದತ್ತಜಯಂತಿ ಸಂದರ್ಭದಲ್ಲಿ ಸಿಟಿ ರವಿ ಸೇರಿದಂತೆ ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ ನೆರವೇರಿತು. ಚಿಕ್ಕಮಗಳೂರು ನಗರದ ಬಸವನಹಳ್ಳಿ ರಸ್ತೆಯಲ್ಲಿ ಸಿಟಿ ರವಿ ಹಾಗೂ ಇತರ ದತ್ತಮಾಲಾಧಾರಿಗಳು ಮನೆ ಮನೆಗಳಿಗೆ ತೆರಳಿ ಪಡಿ ಸಂಗ್ರಹ ಮಾಡಿದರು. ಅಕ್ಕಿ, ಕಾಯಿ, ಬೆಲ್ಲವನ್ನು ಪಡಿ ರೂಪದಲ್ಲಿ ಸಂಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!