Tuesday, July 28, 2026
Homeಕ್ರೈಮ್CT Ravi Case: ವಿವಾದಾತ್ಮಕ ಹೇಳಿಕೆಯ FIR ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ :‌ ಜುಲೈ 31ಕ್ಕೆ...

CT Ravi Case: ವಿವಾದಾತ್ಮಕ ಹೇಳಿಕೆಯ FIR ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ :‌ ಜುಲೈ 31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Telegram Group
Join Now

ಚಿಕ್ಕಮಗಳೂರು/ ಬೆಂಗಳೂರು: ನೀಟ್ ಪ್ರತಿಭಟನೆ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ಜುಲೈ 31ಕ್ಕೆ ವಿಚಾರಣೆ ಮುಂದೂಡಿದೆ.

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ್ದ ಸಿಟಿ ರವಿ, ‘ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಎಂದು ಹೇಳಿಕೆ ನೀಡಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿಟಿ ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದ್ದಾರೆ. 3ನೇ ವ್ಯಕ್ತಿ ಈ ಕೇಸ್ ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಸಿಟಿ ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ಇನ್ನು ನೋಟಿಸ್ ತಲುಪಿಲು ಹೋದ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ಕಾಂಗರೂ ಕೋರ್ಟ್ ನಂತೆ ವರ್ತಿಸಿದ್ದಾರೆಂದು ಎಸ್ ಪಿಪಿ ಬಿ.ಎನ್. ಜಗದೀಶ್ ಎಂದು ಪ್ರತಿವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments