ಹಾಸನ: ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದ ಕುಮಾರ್(60) ಹೇಮಾವತಿ ನಾಲೆಯಲ್ಲಿ ಕೊಚ್ಚಿ ಹೋಗಿದ್ದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೃತದೇಹಕ್ಕಾಗಿ ಮೂರು ದಿನಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹರಿಹರಪುರ ಕೊಪ್ಪಲಿನ ಸಮೀಪ ಹಾದು ಹೋಗಿರುವ ಹೇಮಾವತಿ ನಾಳೆಯಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ನಾಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳೀಯರು ನೋಡಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.
ಕುಟುಂಬದವರು, ಪೊಲೀಸರಿಗೆ ದೂರು ನೀಡಿದ್ದು ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸುತ್ತಿದ್ದು ದೊಡ್ಡ ಕುಂಚೇವು ಕೆರೆಯಲ್ಲಿ ಮೃತದೇಹಕ್ಕಾಗಿ ಹುಡುಕಿ ಅಗ್ನಿಶಾಮಕ ಸಿಬ್ಬಂದಿಯವರು ವಾಪಸ್ ಬಂದಿದ್ದಾರೆ.
ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಕುಟುಂಬಸ್ಥರು ಜಿಲ್ಲಾಧಿಕಾರಿಗಳಿಗೆ ಮೃತದೇಹ ಹುಡುಕಲು ಮನವಿ ಮಾಡಿದ್ದಾರೆ.