Sunday, August 9, 2026
Homeಇತರೆಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಂದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಚೇರಿ ಭೇಟಿ: ಎಐ...

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಂದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಚೇರಿ ಭೇಟಿ: ಎಐ ಕಮಾಂಡ್ ಸೆಂಟರ್ ವಿಸ್ತರಣೆಗೆ ಸೂಚನೆ

Telegram Group
Join Now

ಚಿಕ್ಕಮಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿಕ್ಕಮಗಳೂರು ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಎಐ (AI) ಕಮಾಂಡ್ ಸೆಂಟರ್ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಸ್ತುತ ನಗರಕ್ಕೆ ಮಾತ್ರ ಸೀಮಿತವಾಗಿರುವ ಈ ಕಮಾಂಡ್ ಸೆಂಟರ್ ವ್ಯವಸ್ಥೆಯನ್ನು ಇಡೀ ಜಿಲ್ಲೆಗೆ ವಿಸ್ತರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಜಿತೇಂದ್ರ ಕುಮಾರ್ ದಯಾಮ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ, ಸಹಾಯಕ ಸಬ್ ಇನ್‌ಸ್ಪೆಕ್ಟರ್ (ASI) ಆಗಿ ಮುಂಬಡ್ತಿ ಹೊಂದಿರುವ ಬಿ.ಕೆ. ಶಿವಾನಂದ ಅವರ ಹೆಗಲಿಗೆ ನಕ್ಷತ್ರ (Star) ಹಚ್ಚುವ ಮೂಲಕ ಸಚಿವರು ಅವರಿಗೆ ಶುಭ ಹಾರೈಸಿ, ಅಭಿನಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments