Sunday, November 22, 2026
Homeಕ್ರೈಮ್ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ: ಬೆಂಗಳೂರಿಂದ ಟ್ರಿಪ್ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾ*ವು!

ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ: ಬೆಂಗಳೂರಿಂದ ಟ್ರಿಪ್ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾ*ವು!

Telegram Group
Join Now

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್‌ನ ಅಲೆಖಾನ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ 24 ವರ್ಷದ ಯುವಕ ಚಿರಾಗ್ ಮೃತಪಟ್ಟಿದ್ದಾನೆ. ಇನ್ನೊರ್ವ ಯಶಸ್ ಪ್ರಾಣಪಾಯದಿಂದ ಪಾರು, ಇಬ್ಬರು ಕಾಲೇಜಿನ ಸ್ನೇಹಿತರು.

ಬೆಂಗಳೂರಿನಿಂದ ಚಾರ್ಮಾಡಿ ಘಾಟ್‌ನ ಪ್ರಕೃತಿ ಸೌಂದರ್ಯ ಹಾಗೂ ವ್ಯೂ ಪಾಯಿಂಟ್ ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಬೈಕ್ ಚಾರ್ಮಾಡಿ ಘಾಟ್‌ನ ತಡೆಗೋಡೆಗೆ ತಾಗಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಬಿದ್ದಿದ್ದಾನೆ.

ಇದೇ ಸಂದರ್ಭದಲ್ಲಿ ಕಡೂರಿನಿಂದ ಧರ್ಮಸ್ಥಳದ ಚಲಿಸುತಿದ್ದ ಬಸ್‌ನ ಹಿಂಬದಿ ಚಕ್ರ ರಸ್ತೆಗೆ ಬಿದ್ದಿದ್ದ ಯುವಕನ ತಲೆಯ ಮೇಲೆ ಹರಿದಿದೆ. ಪರಿಣಾಮ ಹೆಲ್ಮೆಟ್ ಸಮೇತ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!