ಚಿಕ್ಕಮಗಳೂರು: ದಲಿತ ಮತ್ತು ಹಿಂದುಳಿದ ಮಠಾಧೀಶರು ನನ್ನನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದ್ದರೆ ಯಾವ ಸಮುದಾಯ ಜಾತಿಗಳಿಗೆ ಅವಮಾನ ಮಾಡುವ ಉದ್ದೇಶವಾಗಿಲ್ಲ ನಿಂದಿಸುವ ರೀತಿಯಲ್ಲಾಗಲಿ ಮಾತನಾಡಿಲ್ಲ ಎಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿದ್ದಕ್ಕೆ ವಿಷಾದಿಸುತ್ತೇನೆ, ಇದು ನೋವಿನ ಸಂಗತಿ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ. ಭದ್ರಾವತಿಯ ವೀರಶೈವ ಲಿಂಗಾಯತ ಕಾರ್ಯಕ್ರಮದಲ್ಲಿ ನಾವು ಧರ್ಮ ಪರಂಪರೆ, ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ. ಅನ್ಯ ಬೇರೆ ಯಾವುದೇ ಜಾತಿ ಕುರಿತು ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಠಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ.