ಬೀದರ್: ಸೆಪ್ಟೆಂಬರ್ ನಲ್ಲಿ ಕ್ರಾಂತಿ ಆಗುತ್ತಾ ಗೊತ್ತಿಲ್ಲ, ಆದರೆ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆರ್ಥಿಕ ಸ್ಥಿತಿ ತೆರೆದ ಪುಸ್ತಕದ ರೀತಿಯಾಗಿದೆ. ನಿಮ್ಮ ಪಕ್ಷದ ಶಾಸಕರೇ ಅನುದಾನ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಶಾಸಕರು ಅಸಹಾಯಕತೆಯಿಂದ ಹೇಳಿಕೆ ನೀಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಒಂದು ನಯಾಪೈಸೆಯನ್ನು ನೀಡಿಲ್ಲ ಹಾಗೆ ಈ ಸರ್ಕಾರದ ಮೇಲೆ ರಾಜ್ಯದ ಜನರು ವಿಶ್ವಾಸ ಕಳೆದುಕೊಂಡು ಬಹಳ ದಿನವಾಗಿದ್ದು, ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಅದೇನೋ ಸೆಪ್ಟೆಂಬರ್‌ಗೆ ಕ್ರಾಂತಿ ಆಗುತ್ತೆ, ಕ್ರಾಂತಿಯಾಗುತ್ತದೆ ಎನ್ನುತ್ತಿದ್ದಾರೆ. ಆದರೆ ಆ ಕ್ರಾಂತಿಯಾಗುತ್ತದೋ ಇಲ್ವೋ ಗೊತ್ತಿಲ್ಲ. ಆದರೆ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ. ಕಾದು ನೋಡೋಣ ಎಂದರು.