Tuesday, November 17, 2026
Homeಜಿಲ್ಲಾಸುದ್ದಿ56 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಬಿಡುವ ಆದೇಶವನ್ನು ತಕ್ಷಣವೇ ಹಿಂಪಡೆಯಿರಿ : ಇಲ್ಲದಿದ್ರೆ ಬಿಜೆಪಿ ...

56 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಬಿಡುವ ಆದೇಶವನ್ನು ತಕ್ಷಣವೇ ಹಿಂಪಡೆಯಿರಿ : ಇಲ್ಲದಿದ್ರೆ ಬಿಜೆಪಿ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಪ್ರತಿಭಟನೆ!

Telegram Group
Join Now

ಶೃಂಗೇರಿ: 56 ಕಾಡಾನೆಗಳನ್ನು ಒಂದು ತಿಂಗಳೊಳಗೆ ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುತ್ತೇವೆ ಎನ್ನುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಇಲ್ಲದಿದ್ದರೆ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಬಿಜೆಪಿ ಆಗ್ರಹಿಸಿದೆ.

ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ದಾಳಿಗೆ ಮೂರು ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಮೂಡಿಗೆರೆ-ಬೇಲೂರು ರಸ್ತೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಶಿವಲಿಂಗೇಗೌಡ ಅವರು 56 ಕಾಡಾನೆಗಳನ್ನು ಒಂದೇ ತಿಂಗಳ ಒಳಗೆ ಭದ್ರಾ ಅಭಯಾರಣ್ಯಕ್ಕೆ ಓಡಿಸಲು ಸರ್ಕಾರ ಆದೇಶ ನೀಡಿದೆ ಎಂದು ಹೇಳಿರುವುದು ಶೃಂಗೇರಿ ಕ್ಷೇತ್ರದ ಜನರಿಗೆ ಆತಂಕವನ್ನುಂಟು ಮಾಡಿದೆ.

ಈ ಆದೇಶದಿಂದಾಗಿ ಶೃಂಗೇರಿ ಕ್ಷೇತ್ರದ ರೈತರಿಗೆ ದೊಡ್ಡ ಸಮಸ್ಯೆ ಎದುರಾಗಲಿದ್ದು ಈ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಶಾಸಕರು ಹಾಗೂ ಸರ್ಕಾರ ಈ ಆದೇಶವನ್ನು ಹಿಂಪಡೆದಿರುವ ಬಗ್ಗೆ ಅಧಿಕೃತ ಆದೇಶವನ್ನು ತಕ್ಷಣವೇ ಹೊರಡಿಸಬೇಕು ಇಲ್ಲದಿದ್ದಲ್ಲಿ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಮಟ್ಟದ ಹೋರಾಟವನ್ನು ಬಿಜೆಪಿ ಕೈಗೆತ್ತಿಕೊಳ್ಳಲಿದೆ. ಜನರ ಆತಂಕವನ್ನು ನಿರ್ಲಕ್ಷಿಸಿ ಸರ್ಕಾರ ಹಾಗೂ ಶಾಸಕರು ಮುಂದುವರೆದರೆ ಮುಂದಿನ ಹೋರಾಟಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಶೃಂಗೇರಿ ಕ್ಷೇತ್ರದಲ್ಲಿ ಕಾಡಾನೆಗಳ ದಾಳಿಗೆ ಬಲಿಗಳಾಗಿದ್ದು, ಭದ್ರಾ ಅಭಯಾರಣ್ಯ ಭಾಗದ ರೈತರಿಗೆ ಕಾಡಾನೆಗಳ ಕಾಟದಿಂದ ತೊಂದರೆಯಾಗುತ್ತಿದ್ದು ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಹಲವಾರು ಭಾರೀ ಮನವಿ ಮಾಡಿದರು ಈ ವರೆಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಇನ್ನೂ 56 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಓಡಿಸಿ ಮತ್ತಷ್ಟು ತೊಂದರೆ ನೀಡುವ ಬದಲು ಶಾಶ್ವತ ಪರಿಹಾರಕ್ಕೆ ಸರ್ಕಾರ ಹಾಗೂ ಶಾಸಕರು ಮುಂದಾಗಬೇಕು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!