ಬಾಳೆಹೊನ್ನೂರು : ಪಟ್ಟಣದಲ್ಲಿ ಶ್ರೀದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯ ವತಿಯಿಂದ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿದ 17ನೇ ವರ್ಷದ ಶ್ರೀ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮಹೋತ್ಸವವು ಅಕ್ಟೋಬರ್ 21ರಂದು ಬಹಳ ವಿಜೃಂಭಣೆಯಿಂದ ನೆರವೇರಲಿದೆ.
ಹೌದು ಶ್ರೀ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮಹೋತ್ಸವವು ಈ ವರ್ಷ ಅತ್ಯಂತ ಸಡಗರ ಹಾಗೂ ಅದ್ಧೂರಿಯಿಂದ ವಿಸರ್ಜನಾ ಮಹೋತ್ಸವವು ನೆರವೇರಲಿದ್ದು 10ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು ಹೀಗಾಗಿ ಈ ಉದ್ದೇಶದಿಂದ ಸುಗಮ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಿದ್ದು ಹಾಗೂ ಮದ್ಯ ಮಾರಾಟ ನಿಷೇಧವನ್ನು ಜಾರಿ ಮಾಡಿದೆ.
ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಬಾಳೆಹೊನ್ನೂರು ಮತ್ತು ಮಾಗುಂಡಿ ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣ ವ್ಯಾಪ್ತಿಯ ಹೇರೂರು ಮತ್ತು ಶಾಂತಿ ಗ್ರಾಮಗಳಲ್ಲಿ ಎಲ್ಲಾ ಮಾದರಿಯ ಮದ್ಯದ ಅಂಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಹಾಗೆ ಈ ಅವಧಿಯಲ್ಲಿ ಯಾವುದೇ ಮದ್ಯ ಮಾರಾಟ ಸಾಗಾಣಿಕೆ ಮತ್ತು ತಯಾರಿಕೆ ಮಾಡದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು ನಿಯಮ ಉಲ್ಲಂಘಿಸುವ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.
ಹಾಗೆ ಮತ್ತೊಂದಡೆ ಮೆರವಣಿಗೆ ಹಾದಿಯ ಸಮಯದಲ್ಲಿ ಯಾವುದೇ ರೀತಿಯ ಅಡಚಣೆ ಹಾಗೂ ಸಂಚಾರ ದಟ್ಟಣೆ ಉಂಟಾಗದಂತೆ ಸುಗಮ ವಾಹನ ಸಂಚಾರ ಮತ್ತು ಕಾನೂನು ಸುವವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಕ್ಟೋಬರ್ 21ರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಂಚಾರ ಮತ್ತು ನಿಲುಗಡೆಯ ಮೇಲು ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ.
ಬಾಳೆಹೊನ್ನೂರು ಪಟ್ಟಣದ ಪ್ರಮುಖ ರಸ್ತೆಯ ಶ್ರೀ ರಂಭಾಪುರಿ ಪೆಟ್ರೋಲ್ ಬಂಕ್ ನಿಂದ ಪ್ರಕಾಶ್ ಸರ್ಕಲ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ನಿಲ್ಲುಗಡೆಯನ್ನು ನಿರ್ಬಂಧಿಸಲಾಗಿದೆ ಇದರೊಂದಿಗೆ ನರಸಿಂಹರಾಜಪುರ ಕೊಪ್ಪ ಚಿಕ್ಕಮಗಳೂರು ಕಳಸ ಕಡೆಯಿಂದ ಬಾಳೆಹೊನ್ನೂರು ಪಟ್ಟಣಕ್ಕೆ ಪ್ರವೇಶಿಸುವ ಎಲ್ಲಾ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ
