Thursday, July 2, 2026
Homeಉದ್ಯೋಗಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಸರ್ಕಾರ ಸಮ್ಮತಿ - ಗೌರವಧನ ಸಹಿತ ರಜೆ ಎಂದ ಸಿದ್ದರಾಮಯ್ಯ

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಸರ್ಕಾರ ಸಮ್ಮತಿ – ಗೌರವಧನ ಸಹಿತ ರಜೆ ಎಂದ ಸಿದ್ದರಾಮಯ್ಯ

Telegram Group
Join Now

ಬೆಂಗಳೂರು : ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡೋದಕ್ಕೆ ಸರ್ಕಾರ ಸಮ್ಮತಿಸಿದೆ. ಹೋರಾಟ ನಿರತ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ಸಂಧಾನ ಸಭೆಯಲ್ಲಿ ಈ ನಿರ್ಧಾರ ಪ್ರಕಟವಾಗಿದೆ. ತಿಂಗಳಿಗೆ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡುವುದಾಗಿ ಸರ್ಕಾರ ತಿಳಿಸಿದೆ.
ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರ ಚಟುವಟಿಕೆಯ ಮಾಹಿತಿಯನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ : ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು. ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ಯಾವತ್ತಿಗೂ ನಿಮ್ಮೊಂದಿಗಿದೆ. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಸಿಎಂ ಸಿದ್ದರಾಯ್ಯ ಇದೇ ಸಂದರ್ಭ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments