ಧಾರವಾಡ: ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ

ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು.
ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಬರಮಣ್ಣಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ವೇದಿಕೆ ಮೇಲೆ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗೆ “ಏಯ್.. ಯಾರಿಲ್ಲಿ ಎಸ್‌ಪಿ?” ಎಂದು ಕೂಗಿ ಕೈ ಎತ್ತಲು ಮುಂದಾದರು.
ಬೆಳಗಾವಿ ಜಿಲ್ಲೆಯಲ್ಲಿ ಅವರು ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ನಡೆದ ಕುಖ್ಯಾತ ರೌಡಿ ಪ್ರವೀಣ್ ಶಿಂತ್ರೆ ಎನ್‌ಕೌಂಟರ್ ಅನ್ನು ಅವರೇ ಮುನ್ನಡೆಸಿದ್ದರು. ನಾರಾಯಣ.ವಿ.ಭರಮನಿ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಗ್ರಾಮದವರು.