Tuesday, October 13, 2026
Homeಕ್ರೈಮ್Inter-caste Marriage: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಪ್ರಿಯತಮೆಗೆ ಕೈಕೊಟ್ಟು ಪ್ರಿಯಕರ ಎಸ್ಕೇಪ್

Inter-caste Marriage: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಪ್ರಿಯತಮೆಗೆ ಕೈಕೊಟ್ಟು ಪ್ರಿಯಕರ ಎಸ್ಕೇಪ್

Telegram Group
Join Now

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಿಯತಮೆಗೆ ಕೈಕೊಟ್ಟು ಪ್ರಿಯಕರ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ, ಕಲ್ಲೇಸೋಮಹಳ್ಳಿ ಗ್ರಾಮದ ಸೂರ್ಯ (26) ಹಾಗೂ ಕಾಸರಗೋಡು ಮೂಲದ ಯುವತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿನಿಂದ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಈ ವಿಷಯವನ್ನು ಸೂರ್ಯ ಪೋಷಕರಿಗೂ ತಿಳಿಸಿದ್ದರು. ಇಬ್ಬರ ಮದುವೆಗೆ ಸೂರ್ಯ ಪೋಷಕರು ಒಪ್ಪಿದ್ದರು ಎನ್ನಲಾಗಿದೆ. ಆದರೆ ಯುವತಿ ತಾಯಿ ಮದುವೆಗೆ ನಿರಾಕರಿಸಿದ್ದು ಮಗಳ ಜೊತೆ ಸಂಪರ್ಕ ಕಡಿದುಕೊಂಡಿದ್ದರು.‌

ಸೂರ್ಯ ಸ್ನೇಹಿತ ಪ್ರವೀಣ್ ಎಂಬವರು ಆತನ ಪೋಷಕರಿಗೆ ನನ್ನ ಬಗ್ಗೆ ಇಲ್ಲಸಲ್ಲದ್ದ‌ನ್ನು ಹೇಳಿದ್ದು ಇದರಿಂದ ಸೂರ್ಯ ಪೋಷಕರು ಮದುವೆ ಬೇಡ ಎನ್ನುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಸೆ.24ರಂದು ಫೋನ್ ಬಿಟ್ಟು ಸೂರ್ಯ ನಾಪತ್ತೆಯಾಗಿದ್ದು, ಆತನ ಪೋಷಕರನ್ನು ಪ್ರಶ್ನಿಸಿದರೆ ನನಗೇನು ಗೊತ್ತಿಲ್ಲ. ಪದೇ ಪದೇ ಫೋನ್ ಮಾಡಿದರೆ ಸರಿ ಇರಲ್ಲ ಎಂದು ಧಮ್ಕಿ ಹಾಕುತ್ತಿದ್ದಾರೆ. ನನ್ನ ವಿರುದ್ಧವೇ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಯುವತಿ ಕಣ್ಣೀರಿಟ್ಟಿದ್ದಾಳೆ. ಇದರಿಂದ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ನನ್ನ ಸಾವಿಗೆ ಸೂರ್ಯ, ಆತನ ಪೋಷಕರು ಹಾಗೂ ಪ್ರವೀಣ್ ಕಾರಣ. ಹದಿನೈದು ದಿನಗಳಿಂದ ಊಟ, ನಿದ್ದೆ ಇಲ್ಲದೆ ಸಾಯುತ್ತಿದ್ದೇನೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಯುವತಿ ಕಣ್ಣೀರಿಟ್ಟಿದ್ದು, ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!