ಉಡುಪಿ: ನಿನ್ನೆಯಷ್ಟೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು ಇಂದು ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇನ್ನು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದು ಕುಟುಂಬ ಸಮೇತರಾಗಿ ನಾಗಬನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿರುವ ತಮ್ಮ ನಿವಾಸದಲ್ಲಿ ಕೆಲಹೊತ್ತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ್ರು. ನಂತರ ಕುಟುಂಬ ಸಮೇತ ನಾಗಬನಕ್ಕೆ ತೆರಳಿ ಪೂಜೆ ಸಲ್ಲಿಸಿದ್ರು. ಇನ್ನು ನಿನ್ನೆಯಷ್ಟೇ ಮತದಾನ ಮುಗಿದಿದ್ದು ಇದೀಗ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಬಿಜೆಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂದೆನಿಸಿದ್ರೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಕ್ಷೇತ್ರದಲ್ಲಿ ಬಾರಿ ಹವಾ ಎಬ್ಬಿಸಿದ್ದಾರೆಂಬುದು ಸುಳ್ಳಲ್ಲ.