Tuesday, September 8, 2026
Homeಕ್ರೈಮ್Jeep Accident: ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಎತ್ತರದಿಂದ ಉರುಳಿದ ಪ್ರವಾಸಿ ಜೀಪ್‌!

Jeep Accident: ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಎತ್ತರದಿಂದ ಉರುಳಿದ ಪ್ರವಾಸಿ ಜೀಪ್‌!

Telegram Group
Join Now

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್‌ವೊಂದು  ಸುಮಾರು 40 ಅಡಿ ಎತ್ತರದಿಂದ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಡೆದಿದೆ.

ಚಂದ್ರದ್ರೋಣ ಪರ್ವತದ ಸಾಲಿನ ಝರಿ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್‌ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. 40 ಅಡಿ ಎತ್ತರದಿಂದ ಬಿದ್ದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜು-ಗುಜ್ಜಾಗಿದೆ.

ಅದೃಷ್ಟವಶಾತ್ ಚಾಲಕ ಸೇರಿದಂತೆ ಮೂವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಹಾಗೂ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾರೀ ಅನಾಹುತ ತಪ್ಪಿದೆ

ಅಪಘಾತಕ್ಕೆ ಜೀಪ್‌ ಚಾಲಕನ ವೇಗದ ಚಾಲನೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!