ಮೂಡಿಗೆರೆ: ಪಟ್ಟಣದ ನಿವಾಸಿ, ನಿವೃತ್ತ ಶಿಕ್ಷಕ ಜೋಸೆಫ್ (84) ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ .
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ವಾಸ್ತವ್ಯವಿದ್ದುಕೊಂಡು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಮೃತರಾಗಿದ್ದು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕವನ, ಕವಿತೆ,ಸಾಹಿತ್ದ ಜೊತೆಗೆ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರ ಅಗಲಿಕೆಗೆ ಕುಟುಂಬಸ್ಥರು, ಹಳೇ ವಿದ್ಯಾರ್ಥಿಗಳು ಅಪಾರ ಕಂಬಿನಿ ಮಿಡಿದಿದ್ದಾರೆ, ಕ್ರಿಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ರಾಜ್ಯ ಮಟ್ಟದಲ್ಲಿ ಗುರುತಿಸಿಸಿದ ಕೀರ್ತಿ ಇವರದ್ದಾಗಿದ್ದು ಅನೇಕ ಬಡ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಕ್ರೀಡಾ ಸಾಮಗ್ರಿ ಕೊಡಿಸಿ ಮಕ್ಕಳಿಗೆ ತರಬೇತಿ ನೀಡಿದ್ದರು.
ಶಿಕ್ಷಕರು ನಮ್ಮ ಜೀವನದ ನಿಜವಾದ ದಾರಿದೀಪಗಳು. ಅಕ್ಷರಜ್ಞಾನದ ಜೊತೆಗೆ ಒಳ್ಳೆಯ ಸಂಸ್ಕಾರ, ನೈತಿಕತೆ ಮತ್ತು ಜೀವನದ ಪಾಠಗಳನ್ನು ಕಲಿಸುವವರು ಶಿಕ್ಷಕರು ಆ ಸಾಲಿಗೆ ಇವರು ಕೂಡ ಸೇರುತ್ತಾರೆ.
1985-1999ರ ಇಸವಿಯಲ್ಲಿ ಮೂಡಿಗೆರೆ ತಾಲೂಕಿನ ದಾರದಹಳ್ಳಿ. ಕಡಿದಾಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾರ್ಯ ನಿರ್ವಹಿಸಿದ ಇವರು ಕರಡಿ ಬೆಟ್ಟಕ್ಕೆ ಹೋಯಿತು ಎಂಬ ಹಾಸ್ಯಸ್ಪದ ಗೀತೆಯೊಂದಿಗೆ ವಿದ್ಯಾರ್ಥಿಗಳ ಮನದಲ್ಲಿ ಹಚ್ಚ ಹಸಿರಾಗಿ ಉಳಿದಿದ್ದಾರೆ. ಇವರ ಗರಡಿಯಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ರಾಜಕೀಯ, ಉದ್ಯಮ, ಪತ್ರಿಕಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.
ಅವರು ದೀರ್ಘಕಾಲದವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸೋಣ.
ವರದಿ:ಪುನೀತ್ ಕಡಿದಾಳು
9483811948
