Sunday, May 3, 2026
Homeಜಿಲ್ಲಾಸುದ್ದಿಕಳೆದ ಮೂರು ವರ್ಷಗಳಿಂದ ನಡೆಸಿದ ಸುದೀರ್ಘ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಡಿ.ಎನ್.‌ ಜೀವರಾಜ್

ಕಳೆದ ಮೂರು ವರ್ಷಗಳಿಂದ ನಡೆಸಿದ ಸುದೀರ್ಘ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಡಿ.ಎನ್.‌ ಜೀವರಾಜ್

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ತಡರಾತ್ರಿಯವರೆಗೆ ಮುಂದುವರಿದಿದ್ದು, ಫಲಿತಾಂಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಪ್ರತಿಕ್ರಿಯೆ ನೀಡಿದ್ದು, ಕಳೆದ ಮೂರು ವರ್ಷಗಳಿಂದ ನಡೆಸಿದ ಸುದೀರ್ಘ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.

2023ರ ಮೇ 13ರಂದು ಆರಂಭವಾದ ಈ ಹೋರಾಟವು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಮಟ್ಟದವರೆಗೂ ಸಾಗಿದ್ದು, ನಿರಂತರವಾಗಿ ನ್ಯಾಯಕ್ಕಾಗಿ ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು. ಶನಿವಾರ ಬೆಳಿಗ್ಗೆಯಿಂದಲೇ ಮರುಎಣಿಕೆ ಪ್ರಕ್ರಿಯೆ ಆರಂಭವಾದಾಗ ಅದನ್ನು ತಡೆಯಲು ಪ್ರಯತ್ನಗಳು ನಡೆದವು ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಕೊನೆಯಲ್ಲಿ ಸತ್ಯಕ್ಕೆ ಜಯ ಸಿಕ್ಕಿದ್ದು, ಸಂವಿಧಾನದ ಆಶಯ ಎತ್ತಿಹಿಡಿಯಲಾಗಿದೆ ಎಂದು ಜೀವರಾಜ್ ಹೇಳಿದ್ದಾರೆ. ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಮರುಎಣಿಕೆ ಪ್ರಕ್ರಿಯೆ ಮಧ್ಯಾಹ್ನ ಸುಮಾರು 3:45ರ ವೇಳೆಗೆ ಆರಂಭವಾಗಿದ್ದರೂ, ಅದಕ್ಕೂ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವುದು ಆಶ್ಚರ್ಯಕರ ಎಂದು ಹೇಳಿದ್ದಾರೆ.


RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!