ಚಿಕ್ಕಮಗಳೂರು: ಹಾವು ಕಚ್ಚಿ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿಕಲ್ ಗ್ರಾಮದಲ್ಲಿ ನಡೆದಿದೆ.
ಹೌದು.. ಛತ್ತೀಸ್ ಘಡ ಮೂಲದ ಜಾಲ್ ಬಾಯಿ ಸಿಧಾರ್ (42) ಮೃತ ಮಹಿಳೆ.ಅವರು ತಮ್ಮ ಕುಟುಂಬದೊಂದಿಗೆ ಕಳೆದ ಕೆಲವು ದಿನಗಳಿಂದ AKC ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಮಲಗಿದ್ದ ವೇಳೆ ಮಹಿಳೆಯ ಕಾಲಿಗೆ ಹಾವು ಕಚ್ಚಿದೆ. ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಘಟನೆ ಸಂಬಂಧ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು!
