ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಾಂಗ್ರೆಸ್ ಪಾಳಯದಲ್ಲಿ ಶುರುವಾದ ಶಿಥಲ ಸಮರ ಇದೀಗ ತಾರಕ್ಕಕ್ಕೇರಿದೆ. ಶಾಸಕಿ ನಯನಾ ಮೋಟಮ್ಮ ಹಾಗೂ ಪಕ್ಷದ ಹಿರಿಯ ಮುಖಂಡರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಕಾರ್ಯಕರ್ತರು ಪಕ್ಷದ ಕಚೇರಿ ಮುಂಭಾಗ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಅವರು ಹೋಬಳಿ ಅಧ್ಯಕ್ಷ ಶಂಕರ್ ಅವರನ್ನು ಅಮಾನತು ಮಾಡಿದ್ದೇ ಇದಕ್ಕೆ ಕಾರಣವಾಗಿದೆ. ಅಧ್ಯಕ್ಷ ಈ ಸರ್ವಾಧಿಕಾರಿ ಧೋರಣೆ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾರ್ಯಕರ್ತರು ಪಕ್ಷದ ಕಚೇರಿ ಎದುರು ಧರಣಿ ಕುಳಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷದ ಹಿರಿಯರು ಮತ್ತು ಕಿರಿಯರ ನಡುವಿನ ಕೋಲ್ಡ್ ವಾರ್ ತಾರಕ್ಕಕ್ಕೇರಿದ್ದು ಮುಂದಿನ ದಿನಗಳಲ್ಲಿ ಇದು ಯಾವ ಮಟ್ಟಕ್ಕೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ಕಾದು ನೋಡಬೇಕಿದೆ.
