Tuesday, August 11, 2026
Homeಕ್ರೈಮ್ಕೊಪ್ಪ: ಅಕ್ರಮ ಗೋ ಸಾಗಾಟ ಹಿನ್ನೆಲೆ : ಆರೋಪಿಗಳನ್ನ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು!

ಕೊಪ್ಪ: ಅಕ್ರಮ ಗೋ ಸಾಗಾಟ ಹಿನ್ನೆಲೆ : ಆರೋಪಿಗಳನ್ನ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು!

Telegram Group
Join Now

ಕೊಪ್ಪ: ತಾಲೂಕಿನ ಜಯಪುರ ರಸ್ತೆ ತಿರುವಿನ ಬಳಿ ಮಂಗಳವಾರ ಬೆಳ್ಳಂ ಬೆಳಗ್ಗೆ ಅಕ್ರಮ ಗೋ ಸಾಗಾಟ ನಡೆಯುತ್ತಿದ್ದು ಈ ವೇಳೆ ಹಿಂದೂ ಕಾರ್ಯಕರ್ತರು ಇದನ್ನು ತಡೆದು ಆರೋಪಿಗಳನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.

ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದ ವಂಶಿ ಹಾಗೂ ಪ್ರಜ್ವಲ್ ಎಂಬ ಇಬ್ಬರು ಆರೋಪಿಗಳು ಕುಂಚೂರಿನಿಂದ 4 ಹಸುಗಳು ಹಾಗೂ ಒಂದು ಕರುವನ್ನು ಅಕ್ರಮವಾಗಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ, ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕೊಪ್ಪ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಗೋವುಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಪ್ರಕರಣ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments