Sunday, May 10, 2026
Homeಜಿಲ್ಲಾಸುದ್ದಿಕೊಪ್ಪ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಸೋಲು: ದೇವಸ್ಥಾನ, ಚರ್ಚ್‌, ಮಸೀದಿ ಮೊರೆ...

ಕೊಪ್ಪ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಸೋಲು: ದೇವಸ್ಥಾನ, ಚರ್ಚ್‌, ಮಸೀದಿ ಮೊರೆ ಹೋದ ಕೈ ಅಭ್ಯರ್ಥಿ ಟಿ.ಡಿ.ರಾಜೇಗೌಡ

ಕೊಪ್ಪ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಬಳಿಕ ಬಿಜೆಪಿ ಗೆಲುವು ಸಾಧಿಸಿದ್ದು ಕಾಂಗ್ರೆಸ್ ‌ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ವೇಳೆ 201 ಮತಗಳ ಅಂತರದಿಂದ ಕೈ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದು, 2026ರ ಮರು ಎಣಿಕೆಯಲ್ಲಿ 52 ಮತಗಳ ಅಂತರದಿಂದ ಅದೇ ರಾಜೇಗೌಡ ಸೋಲುಂಡಿದ್ದರು. ಇದೀಗ, ಮತಚೋರಿ ಆರೋಪ ಮಾಡಿದ್ದ ಮಾಜಿ ಶಾಸಕ ರಾಜೇಗೌಡ ಹಾಗೂ ಕೈ ಕಾರ್ಯಕರ್ತರು ಮತಚೋರಿ ಮಾಡಿದವರ ವಿರುದ್ಧ ದೇವರ ಮೊರೆ ಹೋಗಿದ್ದಾರೆ.

ಕೊಪ್ಪ ತಾಲೂಕಿನ ವೀರಭದ್ರ ಸ್ವಾಮಿ ದೇವಾಲಯದ ಹಾಗೂ ಗಬ್ಬಾನೆ ಭೂತರಾಯ ದೇಗುಲದಲ್ಲಿ ನೂರಾರು ಕಾರ್ಯಕರ್ತರ ಜೊತೆ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಸಂಕಲ್ಪ ಮಾಡಿದ್ದು, ಮತಚೋರಿ ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ಸಂಕಲ್ಪ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಥವಾ ಬಿಜೆಪಿ ಯಾರೇ ಮತಚೋರಿ ಮಾಡಿದ್ದರು ಕೂಡ ಅವರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಬೇಡಿಕೊಂಡಿದ್ದಾರೆ. ವೀರಭದ್ರ ಸ್ವಾಮಿ ಹಾಗೂ ಭೂತರಾಯನ ದೇಗುಲದ ಬಳಿಕ ಒಂದು ಚರ್ಚ್ ಹಾಗೂ ಒಂದು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ತಪ್ಪಿತಸ್ಥರಿಗೆ ದೇವರೇ ಶಿಕ್ಷೆ ನೀಡಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.

ಈ ಮಧ್ಯೆ 2023ರ ಮತ ಎಣಿಕೆ ವೇಳೆ ಬಿಜೆಪಿಯ ಏಜೆಂಟ್ ಆಗಿದ್ದ ರಾಮಸ್ವಾಮಿ ಹಾಗೂ ಸತೀಶ್ 2023ರ ಮತ ಎಣಿಕೆ ಪಾರದರ್ಶಕವಾಗಿತ್ತು ಎಂದು ಅದೇ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!