Friday, March 27, 2026
Homeಜಿಲ್ಲಾಸುದ್ದಿಕೊಪ್ಪ: ರಾಜೀವ್ ಗಾಂಧಿ ಸೇವಾ ಕೇಂದ್ರದ ಮೇಲಂತಸ್ತು ಕಟ್ಟಡ ಉದ್ಘಾಟನೆ

ಕೊಪ್ಪ: ರಾಜೀವ್ ಗಾಂಧಿ ಸೇವಾ ಕೇಂದ್ರದ ಮೇಲಂತಸ್ತು ಕಟ್ಟಡ ಉದ್ಘಾಟನೆ

ಕೊಪ್ಪ: ತಾಲ್ಲೂಕಿನ ಅಸಗೋಡು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ತಾಲ್ಲೂಕು ಪಂಚಾಯತಿ ಕೊಪ್ಪ ಹಾಗೂ ಗ್ರಾಮ ಪಂಚಾಯತಿ ಅಸಗೋಡು ಇವರ ಸಂಯುಕ್ತಾಶ್ರಯದಲ್ಲಿ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರದ ಮೇಲಂತಸ್ತು ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಿತು.

ಹೌದು .. ಅಧ್ಯಕ್ಷರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡರವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಉಧ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ಸ್ವಸಹಾಯ ಸಂಘದ ಕ್ಯಾನೋಪಿ ತೆರೆದು ಮಹಿಳೆಯರೇ ಉತ್ಪಾದಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ,ಕೆ.ಡಿ.ಪಿ ನಾಮನಿರ್ದೇಶಿತ ಸದಸ್ಯರು,ಗ್ರಾ.ಪಂ ಮಾಜಿ ಅಧ್ಯಕ್ಷರುಗಳು ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ಸಂಜೀವಿನಿ ಜಿ.ಪಿ.ಎಲ್.ಎಫ್ ಅಧ್ಯಕ್ಷರು,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು,ಸ್ವ ಸಹಾಯ ಸಂಘದ ಮಹಿಳೆಯರು,ಸಮುದಾಯ ಆರೋಗ್ಯ ಅಧಿಕಾರಿಗಳು,ಸಾರ್ವಜನಿಕರು ಹಾಗೂ ಮತ್ತಿತರರು ಇದ್ದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ಮಂಜುಳಾರವರು ಸ್ವಾಗತಿಸಿ,ಕು.ಸುಮಲತಾ ನಿರೂಪಿಸಿ ವಂದಿಸಿದರು.

ವರದಿ: ವಿಠಲ್‌ ಶೃಂಗೇರಿ

7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!