ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದ್ದು ಭಾನುವಾರ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.
ಹೌದು .. ಮಳೆಯ ಅಬ್ಬರಕ್ಕೆ ಮನೆಯ ಹಿಂದಿನ ಧರೆ ಕುಸಿತಗೊಂಡಿರುವ ಘಟನೆ ಕೊಪ್ಪ ತಾಲೂಕಿನ ಮೀಗಾ ಗ್ರಾಮದಲ್ಲಿ ನಡೆದಿದೆ.ಹಾಗೆ ಧರೆಯ ಮಣ್ಣು ಕುಸಿದ ಪರಿಣಾಮ ಮನೆಯ ಗೋಡೆ ಹಾಗೂ ಕೊಟ್ಟಿಗೆ ಕುಸಿತಗೊಂಡಿದೆ.
ಹರೀಶ್ ಭಟ್ ಎಂಬುವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆಯಾಗಿದ್ದು ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
