ಕೊಪ್ಪ: ನುಗ್ಗಿ ಗ್ರಾಮ ಪಂಚಾಯತಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಕೊಪ್ಪ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಡೆದ ಬಪ್ಪುಂಜಿ ಕೈಮರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಮತಿ ನಂದಿನಿ ಎಂ.ಎನ್ ಸಿವಿಲ್ ನ್ಯಾಯಾಧೀಶರು ಇವರು ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು.

ನುಗ್ಗಿ ಜಗದೀಶ್ ಮಾತನಾಡಿ ಈ ದಿನ ನುಗ್ಗಿ ಗ್ರಾಮ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ವಕೀಲರ ಸಂಘ ಕೊಪ್ಪ ಹಾಗೂ ವಿವಿಧ ಇಲಾಖೆಗಳನ್ನೊಳಗೊಂಡಂತೆ ಬಪ್ಪುಂಜಿ ಕೈಮರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನೂನು ಅರಿವು-ನೆರವು ಶಿಬಿರ ಹಾಗೂ ಹದಿಹರೆಯದ ಮಕ್ಕಳಿಗೆ ಮಾಹಿತಿ ಹಾಗೂ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ನಡೆಸಿ ಬಹಳಷ್ಟು ಮಾಹಿತಿ ಗಳನ್ನು ನೀಡಿದ್ದಾರೆ ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದ್ದು ಮುಂದಿನ ದಿನಗಳಲ್ಲೂ ನಿಮ್ಮ ಸಹಕಾರ ಹೀಗೆ ಇರಲಿ ಎಂದರು.

ಈ ಸಂದರ್ಭದಲ್ಲಿ ನುಗ್ಗಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ವತಿಯಿಂದ ಸಿವಿಲ್ ನ್ಯಾಯಧೀಶರಾದ ಶ್ರೀಮತಿ ನಂದಿನಿ ಎಂ ಎನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಂತರ ಮಕ್ಕಳ ಗ್ರಾಮ ಸಭೆ ಹಾಗೂ ಮಹಿಳಾ ಗ್ರಾಮ ಸಭೆಯನ್ನು ಏರ್ಪಡಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ವಕೀಲರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಆಡಳಿತ ಮಂಡಳಿಯವರು ಶಾಲಾ ಮಕ್ಕಳು ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಶಶಿ ಬೆತ್ತದಕೊಳಲು
