ಕೊಪ್ಪ: ಶೃಂಗೇರಿ ವಿಧಾನಸಭಾ ಕ್ಷೇತ್ರ ಕೊಪ್ಪ ಪಟ್ಟಣ ಹಾಗೂ ಸುತ್ತಮುತ್ತಲಿನ ಬಾಳೆಹಿತ್ಲು, ಕುರಿಗಡ್ಡ, ಅರ್ಡಕ್ ಎಸ್ಟೇಟ್, ಗುಡ್ಡೆಹಳ್ಳ ಭಾಗಗಳಲ್ಲಿ ಎರಡು ಕಾಡಾನೆಗಳು ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ದೊರೆತಿದೆ.
ಕಾಡಾನೆಗಳು ರಸ್ತೆ ಹಾಗೂ ವಸತಿ ಪ್ರದೇಶಗಳಿಗೆ ಸಂಚರಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿ ಸ್ಥಳಿಯರ ಬಲಿ ಮನವಿ ಮಾಡಿಕೊಂಡಿದೆ.
ಆನೆಗಳ ಚಲನವಲನಗಳ ಬಗ್ಗೆ ಯಾವುದೇ ಮಾಹಿತಿ ದೊರೆತರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಹಾಗೆ ಸಾರ್ವಜನಿಕರು ಅನಾವಶ್ಯಕವಾಗಿ ಯಾರೂ ಓಡಾಡದಂತೆ ಮತ್ತು ಜಾಗೃತಿ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
