ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದ ತಿಂಗಳು ನಿಗೂಢವಾಗಿ ಸಾವನಪ್ಪಿದ ಶಾಲೆಯ ವಿದ್ಯಾರ್ಥಿನಿ ಶಮಿತಾ ನಿವಾಸಕ್ಕೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಮಾಜಿ ಸಚಿ ಡಿ.ಎನ್.ಜೀವರಾಜ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರ ಜೊತೆ ಶಮಿತಾ ನಿವಾಸಕ್ಕೆ ಭೇಟಿ ನೀಡಿ ಘಟನೆ ಕುರಿತು ಪೋಷಕರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಮಿತ ಪೋಷಕರು ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಸಂಸದರು ಬಳಿ ಅಳಲು ತೋಡಿಕೊಂಡರು. ಈ ವೇಳೆ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಕರಣ ಕುರಿತು ರಾಜ್ಯ ಗೃಹ ಸಚಿವರನ್ನು ಭೇಟಿಯಾಗಿ ಸರಿಯಾದ ತನಿಖೆ ನಡೆಸುವ ಕುರಿತು ಸಚಿವರಿಗೆ ಮನವಿ ಮಾಡುತ್ತೇನೆ ಎಂದರು.