ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಭೈರೆದೇವರು ಗ್ರಾಮದ ಹಂದಿಹಡ್ಲುವಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ತಡ ರಾತ್ರಿ ಭಾಸ್ಕರ ಭಟ್ ಎಂಬುವವರ ಮನೆ ಮೇಲೆ ಮರ ಬಿದ್ದು ಮನೆಯ ಮೇಲ್ಫಾವಣಿ ಹಾಗೂ ಗೃಹಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.
ಮನೆಯವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯತಿ ಸದಸ್ಯರಾದ ರವಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರದಿ: ಶಶಿ ಬೆತ್ತದಕೊಳಲು
