ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಅಗಳಗಂಡಿಯ ಈಚಿಲುಗುಡ್ಡದ ಬಳಿ ಕಾಡುಕೋಣವೊಂದು ರಸ್ತೆ ಮೇಲೆ ಕಾಣಿಸಿಕೊಂಡಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಭಾಗದಲ್ಲಿ ಕಾಡುಕೋಣಗಳು ನಿರಂತರವಾಗಿ ರಸ್ತೆ ಹಾಗೂ ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೂ ತೊಂದರೆಯಾಗಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ ಜೀವಹಾನಿಯೂ ಸಂಭವಿಸಿರುವ ಹಿನ್ನೆಲೆಯಲ್ಲಿ ಜನರು ಇನ್ನಷ್ಟು ಆತಂಕಗೊಂಡಿದ್ದಾರೆ.
