Tuesday, August 11, 2026
Homeಜಿಲ್ಲಾಸುದ್ದಿಕೊಟ್ಟಿಗೆಹಾರ: ಗಾಂಧಿ ಜಯಂತಿ ದಿನದಂದು ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯ

ಕೊಟ್ಟಿಗೆಹಾರ: ಗಾಂಧಿ ಜಯಂತಿ ದಿನದಂದು ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯ

Telegram Group
Join Now

ಕೊಟ್ಟಿಗೆಹಾರ : ಮೂಡಿಗೆರೆ ಅರಣ್ಯ ವಲಯದ ಚಾರ್ಮಾಡಿ ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ “ಸ್ವಚ್ಛತಾ ದಿನ”*ವನ್ನು ಅರಣ್ಯ ಇಲಾಖೆ ಶ್ರದ್ಧಾಭಿಮಾನದಿಂದ ಆಚರಿಸಿತು.

ಈ ಸಂದರ್ಭದಲ್ಲಿ ಘಾಟ್ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಸ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು.

ಪರಿಸರ ಸಂರಕ್ಷಣೆಯ ಮಹತ್ವವನ್ನು ಹತ್ತಿರದಿಂದ ಅರಿಯುವ ಉದ್ದೇಶದಿಂದ ಸಿಬ್ಬಂದಿ ತೊಡಗಿಸಿಕೊಂಡ ಈ ಕಾರ್ಯ ಜನಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಲಯ ಅರಣ್ಯಧಿಕಾರಿ ಜಿ. ಮಂಜುನಾಥ್ ಅವರು, “ಗಾಂಧಿಜಿಯವರ ಕನಸಿನ ಭಾರತವು ಸ್ವಚ್ಛತೆಯ ಆಧಾರದ ಮೇಲೆ ರೂಪುಗೊಳ್ಳಬೇಕಿತ್ತು. ಪ್ರಕೃತಿಯ ಶುದ್ಧತೆಯನ್ನು ಕಾಪಾಡುವುದು ಅರಣ್ಯ ಇಲಾಖೆಯ ಕರ್ತವ್ಯ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರ ನೈತಿಕ ಹೊಣೆಗಾರಿಕೆಯಾಗಿದೆ.

ಚಾರ್ಮಾಡಿಯಂತಹ ಸೊಬಗುಮಯ ಘಾಟ್ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವುದು ನಮ್ಮೆಲ್ಲರ ಗುರಿಯಾಗಬೇಕು” ಎಂದು ಹೇಳಿದರು.

ಅರಣ್ಯ ಇಲಾಖೆಯ ಉಪ ವಲಯ ಅರಣ್ಯ ಅಧಿಕಾರಿಗಳು,ಗಸ್ತು ಅರಣ್ಯಪಾಲಕರು ಹಾಗೂ ಸಹಾಯಕ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸ್ವಚ್ಛತಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments