Wednesday, March 25, 2026
Homeಜಿಲ್ಲಾಸುದ್ದಿಕೊಟ್ಟಿಗೆಹಾರ: ಹೊರಗುತ್ತಿಗೆ ನೌಕರರ ಹಕ್ಕುಗಳಿಗಾಗಿ ಬಲಿಷ್ಠ ಹೋರಾಟ: ಜಿಲ್ಲಾ ಅಧ್ಯಕ್ಷ ಮಂಜು

ಕೊಟ್ಟಿಗೆಹಾರ: ಹೊರಗುತ್ತಿಗೆ ನೌಕರರ ಹಕ್ಕುಗಳಿಗಾಗಿ ಬಲಿಷ್ಠ ಹೋರಾಟ: ಜಿಲ್ಲಾ ಅಧ್ಯಕ್ಷ ಮಂಜು

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಜೈ ಭೀಮ್ ಹಾಲ್‌ನಲ್ಲಿ ಭಾನುವಾರ ನಡೆಯಿತು.

ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಹೆಬ್ರಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರನ್ನು ಒಂದೇ ವೇದಿಕೆಯಲ್ಲಿ ಸಂಘಟಿಸಿ ಅವರ ಹಕ್ಕು, ಗೌರವ ಹಾಗೂ ಸೇವಾ ಭದ್ರತೆಗಾಗಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕುವವರೆಗೆ ಸಂಘದ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಮಂಜು, ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು ವೇತನ ಹಕ್ಕು ಬದಲಾವಣೆ, ಸೇವಾ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಕೊರತೆಯಿಂದ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು. ಈ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಹೋರಾಟ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಬಲಿಷ್ಠ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಪೂರ್ಣೇಶ್ ಹೆಬ್ರಿ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜೀವಿತ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಪಲ್ಗುಣಿ, ಕಾರ್ಯದರ್ಶಿಯಾಗಿ ಭಾರ್ಗವಿ, ಸಂಚಾಲಕರಾಗಿ ಅಣ್ಣಪ್ಪ, ಖಜಾಂಚಿಯಾಗಿ ರಾಗಿಣಿ ಅವರನ್ನು ಆಯ್ಕೆ ಮಾಡಲಾಯಿತು. ಜೊತೆಗೆ ಎಲ್ಲಾ ಇಲಾಖೆಯಿಂದ ಒಬ್ಬೊಬ್ಬ ನೌಕರರನ್ನು ಒಳಗೊಂಡ ಸಲಹಾ ಸಮಿತಿಯನ್ನು ರಚಿಸಲಾಯಿತು.
ತಾಲ್ಲೂಕು ಮಟ್ಟದ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!