Wednesday, March 25, 2026
Homeಕ್ರೈಮ್ಕೊಟ್ಟಿಗೆಹಾರ: ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಥಳಿತ: ಜಾತಿ ನಿಂದನೆ ಆರೋಪದಡಿ ಪ್ರಿನ್ಸಿಪಾಲ್, ಸಿಬ್ಬಂದಿ ವಿರುದ್ಧ...

ಕೊಟ್ಟಿಗೆಹಾರ: ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಥಳಿತ: ಜಾತಿ ನಿಂದನೆ ಆರೋಪದಡಿ ಪ್ರಿನ್ಸಿಪಾಲ್, ಸಿಬ್ಬಂದಿ ವಿರುದ್ಧ ಕೇಸ್

ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಶನಿವಾರ ನಡೆದ ಘಟನೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಥಳಿತ ನಡೆಸಿರುವುದರ ಜೊತೆಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಿನ್ಸಿಪಾಲ್ ಸತೀಶ್ ಪ್ರಸಾದ್ ಜೈಸ್ವಾಲ್ ಹಾಗೂ ಸಿಬ್ಬಂದಿ ಶುಭಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.‌

ವಿದ್ಯಾರ್ಥಿ ಪ್ರೀತಮ್ ಅವರ ತಂದೆ, ಕಡೂರು ಮೂಲದ ರಮೇಶ್ ನಾಯಕ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪೋಷಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!