Tuesday, April 14, 2026
Homeಕ್ರೈಮ್ಕೊಟ್ಟಿಗೆಹಾರ: ಮುಖ್ಯರಸ್ತೆಯಲ್ಲಿ ಸಿಮೆಂಟ್ ಶೀಟ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ-ಕೆಲಕಾಲ ಸಂಚಾರ ಸ್ಥಗಿತ

ಕೊಟ್ಟಿಗೆಹಾರ: ಮುಖ್ಯರಸ್ತೆಯಲ್ಲಿ ಸಿಮೆಂಟ್ ಶೀಟ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ-ಕೆಲಕಾಲ ಸಂಚಾರ ಸ್ಥಗಿತ

ಕೊಟ್ಟಿಗೆಹಾರ: ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಎಂಬಲ್ಲಿ ಸಿಮೆಂಟ್ ಶೀಟ್ ತುಂಬಿದ್ದ ಟ್ರ್ಯಾಕ್ಟರ್ ಆಯತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ರಸ್ತೆಯಲ್ಲೇ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದರೂ, ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಷಾತ್ ಪಾರಾಗಿದ್ದಾರೆ.

ಕಳಸದಿಂದ ಮೂಡಿಗೆರೆ ಕಡೆಗೆ ಸಿಮೆಂಟ್ ಶೀಟ್‌ಗಳನ್ನು ಟ್ರಾಕ್ಟರ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ವೇಳೆ ಕೊಟ್ಟಿಗೆಹಾರ ಸಮೀಪದ ದೇವನಗುಲ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ದು ಅದರಲ್ಲಿದ್ದ ಸಿಮೆಂಟ್ ಶೀಟ್‌ಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದಾಗಿ ಕೊಟ್ಟಿಗೆಹಾರದಿಂದ ಹೊರನಾಡು ಮತ್ತು ಶೃಂಗೇರಿ ಕಡೆಗೆ ಸಾಗುವ ಪ್ರಮುಖ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಹೆದ್ದಾರಿಯ ಮಧ್ಯದಲ್ಲೇ ಟ್ರ್ಯಾಕ್ಟರ್ ಬಿದ್ದಿದ್ದರಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಸ್ಥಳೀಯರ ಸಹಾಯದಿಂದ ಟ್ರ್ಯಾಕ್ಟರ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!