Thursday, July 2, 2026
Homeಜಿಲ್ಲಾಸುದ್ದಿಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡಿಯಲ್ಲಿ ಸಿಗೋದಿಲ್ಲ - ಆಕಾಂಕ್ಷಿಗಳಿಗೆ ಡಿಕೆಶಿ ಕೌಂಟರ್..!‌

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡಿಯಲ್ಲಿ ಸಿಗೋದಿಲ್ಲ – ಆಕಾಂಕ್ಷಿಗಳಿಗೆ ಡಿಕೆಶಿ ಕೌಂಟರ್..!‌

Telegram Group
Join Now

ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ ಅಂತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಡುವ ಕೆಲಸ, ಶ್ರಮವನ್ನು ಗುರುತಿಸಿ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ನೀಡುತ್ತಾರೆ. ಮಾಧ್ಯಮಗಳ ಮುಂದೆ ಬಂದು ಯಾರಾದರು ಹುದ್ದೆ ಕೇಳುತ್ತಾರಾ? ಇದನ್ನೆಲ್ಲ ಹೊಸದಾಗಿ ನೋಡ್ತಿದ್ದೇನೆ ಅಂತ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡುತ್ತಿರುವವರಿಗೆ ಖಾರವಾಗಿ ಪ್ರತಿಕ್ರಿಯಿಸಿದರು.
ಪಕ್ಷದ ಏನೇ ವಿಚಾರ ಇದ್ದರೂ ನಾನೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ. ಈಗ ಪಕ್ಷವನ್ನು ಸಂಘಟಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಶಿಸ್ತು ಕಾಪಾಡುವುದು ಎಲ್ಲರ ಕರ್ತವ್ಯ. ಯಾವುದೇ ವಿಚಾರವನ್ನು ಬಹಿರಂಗವಾಗಿ ಚರ್ಚಿಸದಂತೆ ವರಿಷ್ಠರು ಸೂಚಿಸಿದ್ದಾರೆ ಅಂತ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments